ಮರಸಪ್ಪ ರವಿಗೆ ಕೆಂಪೇಗೌಡ ಪ್ರಶಸ್ತಿ
ಪ್ರತಿ ವರ್ಷವು ಸರ್ಕಾರ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದವರನ್ನು ಗುರುತಿಸಿ ಕೆಂಪೇಗೌಡ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತದೆ. ಪರಿಸರ, ಪ್ರಾಣಿ, ಪಕ್ಷಿಗಳ ಕಾಳಜಿ ಹಾಗೂ ಸಮಾಜ ಸೇವೆಯಲ್ಲಿ ನಿರತರಾಗಿರುವ ಮರಸಪ್ಪ ರವಿ ಅವರನ್ನು ಗುರುತಿಸಿ ರಾಜ್ಯ ಸರ್ಕಾರ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ (Kempegowda Award) ನೀಡಿ ಗೌರವಿಸಿದೆ,
ಬೆಂಗಳೂರಿನಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಕಾರ್ಯಕ್ರಮದಲ್ಲಿ ಮರಸಪ್ಪ ರವಿ (Marasappa Ravi) ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.
