ಏಜೆಂಟ್ ಕಾವೇರಿ ಪಾತ್ರದಲ್ಲಿ ನಟಿ ಅದಿತಿ ಬಾಲನ್

0
20260314_132511.jpg

ಡಾ ವೈಶಾಖ್ ಜೆ ಗೌಡ, ವೈಶಾಖ್ ಜೆ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ “ಆಪರೇಷನ್ ಡ್ರೀಮ್ ಥಿಯೇಟರ್ 666” ಚಿತ್ರದಲ್ಲಿ ಬಹುತಾರಾಗಣವಿದ್ದು.ಈಗಾಗಿ ಚಿತ್ರದ ಮೇಲೆ ಹೆಚ್ಚು ನಿರೀಕ್ಷೆ ಇದೆ.
ಇದೀಗ ತಮಿಳಿನ ರಾಜ್ಯ ಪ್ರಶಸ್ತಿ ಪುರಸ್ಕೃತೆ, ಅದಿತಿ ಬಾಲನ್ ಅವರು ಏಜೆಂಟ್ ಕಾವೇರಿಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾಹಿತಿ ಚಿತ್ರತಂಡದಿಂದ ಬಂದಿದೆ.

ಅರುವಿ” ಚಿತ್ರದ ಮೂಲಕ ಅದಿತಿ ಬಾಲನ್ ಬಣ್ಣದ ಲೋಕಕ್ಕೆ ಕಾಲಿಟ್ಟರು, ಉತ್ತಮ ಅಭಿನಯದಿಂದ ಎಲ್ಲರ ಮನೆಮಾತಾಗಿದ್ದರು. ತದನಂತರ ಕ್ಯಾಪ್ಟನ್ ಮಿಲ್ಲರ್, ಪಡವೆಟ್ಟು ಮುಂತಾದ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಇದೀಗ ಆಪರೇಷನ್ ಡ್ರೀಮ್ ಥಿಯೇಟರ್ 666ನಲ್ಲಿ ಏಜೆಂಟ್ ಕಾವೇರಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

ಚಿತ್ರದ ಐದನೇ ಶೆಡ್ಯೂಲು ಸಂಪೂರ್ಣವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸವನ್ನು ಆರಂಭಿಸಿದೆ. ಕರುನಾಡ ಚಕ್ರವರ್ತಿ ಡಾ ಶಿವರಾಜ್ ಕುಮಾರ್, ನಟರಾಕ್ಷಸ ಡಾಲಿ ಧನಂಜಯ್, ಪ್ರಿಯಾಂಕಾ ಮೋಹನ್, ಅದಿತಿ ಬಾಲನ್ ನಟಿಸುತ್ತಿದ್ದು, ಉಳಿದ ಪಾತ್ರಧಾರಿಗಳ ಮಾಹಿತಿ ಮುಂದಿ ದಿನಗಳಲ್ಲಿ ಬರಬಹುದು.

ಆಕ್ಷನ್, ಡ್ರಾಮಾ ಮತ್ತು ಥ್ರಿಲರ್ ಜಾನರ್‌ನಲ್ಲಿ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಚಿತ್ರ ತಯಾರಾಗುತ್ತಿದೆ. ಈ ಚಿತ್ರಕ್ಕೆ ಚರಣ್ ರಾಜ್ ಸಂಗೀತ ನಿರ್ದೇಶನ ಮಾಡಿದ್ದು, ಅದ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಹರಾಗಿ, ವಿಶ್ವಾಸ್ ಕಶ್ಯಪ್ ಪ್ರೊಡಕ್ಷನ್ ವಿನ್ಯಾಸ ಹಾಗೂ ಇಂಚರ ಸುರೇಶ್ ವಸ್ತ್ರ ವಿನ್ಯಾಸ ಮಾಡಿರುತ್ತಾರೆ.

Share

Leave a Reply

Your email address will not be published. Required fields are marked *