ಯುಗಾದಿ ಹಬ್ಬಕ್ಕೆ ಜೀ5ನಲ್ಲಿ “ಲ್ಯಾಂಡ್ ಲಾರ್ಡ್”

0
20260314_131036.jpg

ದುನಿಯಾ ವಿಜಯ್ “ರಾಚಯ್ಯ” ನ ಪಾತ್ರದಲ್ಲಿ ಮಿಂಚಿದ ಲ್ಯಾಂಡ್ ಲಾರ್ಡ್ ಚಿತ್ರವು ಬಿಡುಗಡೆ ಆಗಿ ಸೂಪರ್-ಡೂಪರ್ ಹಿಟ್ ಆಯಿತು. ಈ ಚಿತ್ರವನ್ನು ಚಿತ್ರಮಂದಿರದಲ್ಲಿ ನೋಡದೇ ಇರುವ ಪ್ರೇಕ್ಷಕರು ಇದೇ ತಿಂಗಳು 19ರಿಂದ ಜೀ5ನಲ್ಲಿ ನೋಡಬಹುದು.

ಸಾರಥಿ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಈ ಚಿತ್ರದಲ್ಲಿ 1980ರಲ್ಲಿ ಗ್ರಾಮೀಣ ಕರ್ನಾಟಕದಲ್ಲಿ ನಡೆಯುವ ಕಥೆಯನ್ನು ಅಚ್ಚುಕಟಾಗಿ ಕಟ್ಟಿಕೊಟ್ಟಿದ್ದಾರೆ ನಿರ್ದೇಶಕ ಜಡೇಶ್ ಕೆ ಹಂಪಿ.

ದುನಿಯಾ ವಿಜಯ್‌ಗೆ ಜೋಡಿಯಾಗಿ ರಚಿತಾ ರಾಮ್, ಪ್ರಮುಖ ಪಾತ್ರಗಳಲ್ಲಿ ರಾಜ್ ಬಿ ಶೆಟ್ಟಿ, ರಿಥನ್ಯಾ ವಿಜಯ್, ಉಮಾಶ್ರೀ, ಭಾವನಾ ರಾವ್, ಸಂಪತ್ ಮೈತ್ರೇಯ ಮುಂತಾದವರು ನಟಿಸಿರುತ್ತಾರೆ.

ನಟ ದುನಿಯಾ ವಿಜಯ್ ಮಾತನಾಡಿ.. ನಾನು ರಾಚಯ್ಯ ಎಂಬ ಪಾತ್ರವನ್ನು ವಹಿಸಿದ್ದೇನೆ. ರಾಚಯ್ಯನು ಒಬ್ಬ ಅಂತರ್ಮುಖಿ. ಹೆಚ್ಚು ಮಾತನಾಡದೇ ಒಳಗಿನ ಭಾವನೆಗಳನ್ನು ವ್ಯಕ್ತಪಡಿಸುವ ಈ ಪಾತ್ರ ನನಗೆ ಒಂದು ಸವಾಲಾಗಿತ್ತು
ಇದೀಗ ಈ ಚಿತ್ರವು ಜೀ5ನಲ್ಲಿ ಬಿಡುಗಡೆ ಆಗುತ್ತಿರುವುದು ನನಗೆ ಸಂತಸ ತಂದಿದೆ. ಪ್ರೇಕ್ಷಕರ ಅಭಿಪ್ರಾಯಕ್ಕಾಗಿ ಕಾಯುತ್ತಿದ್ದೇನೆ.ಎಂದರು.

ಚಿತ್ರದ ಬಗ್ಗೆ ಮಾತನಾಡಿದ ನಟಿ ರಚಿತಾ ರಾಮ್, ಚಿತ್ರವು ಸರಳವಾಗಿದ್ದರೂ, ಕಥೆಯಲ್ಲಿರುವ ಭಾವನೆಗಳು ಆಳವಾಗಿವೆ. ಅಗಾಧವಾದ ಭಾವನೆಗಳನ್ನು ವ್ಯಕ್ತಪಡಿಸುವ ಕಥೆಯೇ “ಲ್ಯಾಂಡ್ ಲಾರ್ಡ್. ಇದರಲ್ಲಿ ನನ್ನದು ಬಹಳ ವಿಶೇಷವಾದ ಪಾತ್ರ. ಎಂದರು.

ಜೀ5 ಕಿರುಪರಿಚಯ
ಜೀ5 ಭಾರತದ ಅತಿ ಮುಖ್ಯ ಡಿಜಿಟಲ್ ವೇದಿಕೆಗಳಲ್ಲಿ ಒಂದಾಗಿದ್ದು, ಬಹುಭಾಷಾ ಕಥೆಗಳನ್ನು ಇಡೀ ಪ್ರಪಂಚಕ್ಕೆ ಕೊಂಡೊಯ್ಯುವಲ್ಲಿ ಯಶಸ್ವಿಯಾಗಿದೆ. ಇದು ಜೀ ಎಂಟರ್ಟೇನ್ಮೆಂಟ್ ಎಂಟರ್ಪ್ರೈಸಸ್ ಲಿಮಿಟೆಡ್ (ZEEL) ಅವರ ಡಿಜಿಟಲ್/ ಓ ಟಿ ಟಿ (0TT) ಮಾಧ್ಯಮವಾಗಿದೆ. ಕನ್ನಡ, ತಮಿಳು, ತೆಲುಗು, ಹಿಂದಿ, ಮಲಯಾಳಂ, ಬೆಂಗಾಲಿ, ಮರಾಠಿ, ಇಂಗ್ಲಿಷ್ ಭಾಷೆಗಳು ಸೇರಿದಂತೆ ಹಲವಾರು ಭಾಷೆಗಳ ಚಿತ್ರಗಳನ್ನು ಪ್ರಸಾರ ಮಾಡುತ್ತದೆ.

Share

Leave a Reply

Your email address will not be published. Required fields are marked *