ಹುಬ್ಬಳ್ಳಿಯಲ್ಲಿ ಅದ್ದೂರಿಯಾಗಿ ಜರುಗಿದ ಮಾರ್ಕ್ ಪ್ರೀ-ರಿಲೀಸ್ ಇವೆಂಟ್

0
20251222_102051

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯಿಸಿರುವ ಬಹು ನಿರೀಕ್ಷೆಯ ಚಿತ್ರ “ಮಾರ್ಕ್” ಚಿತ್ರ ಬಿಡುಗಡೆಗೆ ಕೌಂಟ್‌ಡೌನ್ ಶುರುವಾಗಿದೆ. ಡಿಸೆಂಬರ್ 25ರಂದು ಚಿತ್ರ ರಿಲೀಸ್ ಆಗುತ್ತಿದ್ದು, ಸಿನಿಪ್ರಿಯರು ಸಿನಿಮಾವನ್ನು ನೋಡಲು ಕಾತುರದಿಂದ ಕಾಯುತ್ತಿದ್ದಾರೆ.

ಚಿತ್ರದ ಪ್ರೀ ರಿಲೀಸ್ ಇವೆಂಟ್ ಹುಬ್ಬಳಿಯಲ್ಲಿ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಸುದೀಪ್ ಅವರ ಹಾಡುಗಳಿಗೆ ಚಂದನ್, ಕರಣ್ ಆರ್ಯನ್, ಉಗ್ರಂ ಮಂಜು ಸೇರಿದಂತೆ ಸಿಸಿಎಲ್ ಆಟಗಾರರು ಕಿಚ್ಚನಿಗೆ ಡ್ಯಾನ್ಸ್ ಪರ್ಫಾಮೆನ್ಸ್ ಮೂಲಕ ಗೌರವ ಸಲ್ಲಿಸಿದರು.

ಚಿತ್ರದ ತಾರಾ ಬಳಗ ನವೀನ್ ಚಂದ್ರ, ಗೋಪಾಲಕೃಷ್ಣ ದೇಶಪಾಂಡೆ, ಪ್ರತಾಪ್ ನಾರಾಯಣ್, ಅರ್ಚನಾ ಕೊಟ್ಟಿಗೆ, ರೋಶಿನಿ ಪ್ರಕಾಶ್, ಮಾಲ್ತೇಶ್, ಅಶ್ವಿನ್ ಹಾಸನ್, ಗುರುಸೋಮ್ ಸುಂದರ್ ಭಾಗಿಯಾಗಿದ್ದು, ಪ್ರೀ ರಿಲೀಸ್ ವೇದಿಕೆ ಕಲರ್‌ಪುಲ್‌ಯಿಂದ ರಂಗೇರಿತು.

ಅನೇಕ ಗಣ್ಯರು ಸುದೀಪ್ ಮತ್ತು ಚಿತ್ರಕ್ಕೆ ಶುಭಹಾರೈಸಿದರು,ಈ ವೇದಿಕೆಗೆ ಬಂದ ಎಲ್ಲ ಸ್ನೇಹಿತರಿಗೆ, ಜನಸಾಗರಕ್ಕೆ, ನನ್ನ ಕುಟುಂಬಕ್ಕೆ ಧನ್ಯವಾದಗಳು ಎಂದು ಮಾತು ಆರಂಭಿಸಿದ ಸುದೀಪ್ ಮಾತಾಡೊದಕ್ಕೆ ತುಂಬಾ ಆಸೆ ಇದೆ. ಕೆಲವು ಕಂಟ್ರೋಲ್ ಮಾಡಿಕೊಂಡು ಮಾತಡ್‌ತ್ತೀನಿ..

ಹುಬ್ಬಳ್ಳಿಗೆ ಬಂದು ಈ ಕಾರ್ಯಕ್ರಮ ಮಾಡೋದಕ್ಕೆ ಒಂದು ದೊಡ್ಡ ಕಾರಣ ಇದೆ. ಕೆಲವು ಮಾತು ಈ ಹುಬ್ಬಳಿಗೆ ಬಂದು ವೇದಿಕೆ ಮೇಲೆ ಮಾತಾಡಿದರೆ ಇಡೀ ಕರ್ನಾಟಕಕ್ಕೆ ಎಲ್ಲಿ ತಟ್ಟಬೇಕೋ ತಟ್ಟುತ್ತೆ, ಹೇಗೆ ತಟ್ಟಬೇಕೋ ತಟ್ಟುತ್ತೆ. ಯಾವ ಭರ್ಜರಿಯಲ್ಲಿ ತಟ್ಟಬೇಕೋ ತಟ್ಟುತ್ತೆ. ಎಂದು ಹೇಳುತ್ತ,.

ಜುಲೈ 5ರಂದು ಒಂದು ಪ್ರಾಮಿಸ್ ಮಾಡಿದ್ದೆ. ಡಿಸೆಂಬರ್ 25ನೇ ತಾರೀಕು ಬಾಗಿಲು ತಟ್ಟುತ್ತೇನೆ ಅಂತ. ಜೋರಾಗಿ ತಟ್ಟುತ್ತಾ ಇದ್ದೇವೆ ನಾವು. ಈ ಜರ್ನಿಯಲ್ಲಿ 25ಕ್ಕೆ ಥಿಯೇಟರ್ ನಲ್ಲಿ ಒಂದು ಸಿನಿಮಾ ಬಿಡುಗಡೆ ಆಗುತ್ತೆ. ಆದರೆ ಹೊರಗಡೆ ಒಂದು ಪಡೆ ಯುದ್ಧಕ್ಕೆ ರೆಡಿ ಆಗುತ್ತಾ ಇದೆ. ಈ ವೇದಿಕೆ ಮೇಲಿಂದ ಹೇಳ್ತಾ ಇದ್ದೇನೆ. ಯುದ್ಧಕ್ಕೆ ಸಿದ್ಧ. ಯಾಕೆಂದರೆ ನಾವು ನಮ್ಮ ಮಾತಿಗೆ ಬದ್ಧ ಎಂದು ಕಿಚ್ಚ ಸವಾಲು ಹಾಕಿದರು.

ಕಿಚ್ಚ ಕ್ರಿಯೇಷನ್ ಹಾಗೂ ಸತ್ಯ ಜ್ಯೋತಿ ಬ್ಯಾನರ್‌ನಡಿ ಮಾರ್ಕ್ ಚಿತ್ರ ನಿರ್ಮಾಣವಾಗಿದ್ದು, ವಿಜಯ್ ಕಾರ್ತಿಕೇಯ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.
ಸಿನಿಮಾದಲ್ಲಿ ಸುದೀಪ್ ಜೊತೆಗೆ ಶೈನ್ ಟಾಮ್ ಚಾಕೊ, ಯೋಗಿ ಬಾಬು ಇನ್ನೂ ಕೆಲವು ಪ್ರತಿಭಾವಂತ ನಟರು ನಟಿಸಿದ್ದಾರೆ.

Share

Leave a Reply

Your email address will not be published. Required fields are marked *