ನವೆಂಬರ್ 21ಕ್ಕೆ ಮಫ್ತಿ ಪೊಲೀಸ್ ಚಿತ್ರ ರಿಲೀಸ್
ದಿನೇಶ್ ಲೆಟ್ಚುಮನನ್ ನಿರ್ದೇಶನದ ಮೊದಲ ಸಿನಿಮಾ ಕ್ರೈಂ ಥ್ರಿಲ್ಲರ್ ಜಾನರ್ ಇರುವ “ಮಫ್ತಿ ಪೊಲೀಸ್“ ಚಿತ್ರವು ಇದೇ ತಿಂಗಳು ಅಂದರೆ ನವೆಂಬರ್ 21ರಂದು ಪ್ರಪಂಚದಾದ್ಯಂತ ಬಿಡುಗಡೆ ಆಗುತ್ತದೆ.
ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಜತೆ ಐಶ್ವರ್ಯ ರಾಜೇಶ್ ಒಟ್ಟಿಗೆ ನಟಿಸಿರುವ ಈ ಚಿತ್ರವನ್ನು ಜಿ.ಎಸ್. ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಜಿ ಅರುಲ್‌ಕುಮಾರ್ ನಿರ್ಮಾಣ ಮಾಡಿದ್ದಾರೆ.
ಈಗಾಗಲೇ ಚಿತ್ರದ ಟೀಸರ್ ಬಿಡುಗಡೆ ಆಗಿದ್ದು, ಚಿತ್ರದ ಮೇಲೆ ನಿರೀಕ್ಷೆ ಮೂಡಿಸಿದೆ. ಇನ್ನೂ ಪಾತ್ರದಲ್ಲಿ ಬಿಗ್ ಬಾಸ್ ಖ್ಯಾತಿಯ ಅಭಿರಾಮಿ, ರಾಮ್‌ಕುಮಾರ್, ಜಿ.ಕೆ. ರೆಡ್ಡಿ, ಪಿ.ಎಲ್. ತೇನಪ್ಪನ್, ಲೋಗು, ನಟ ವೇಲಾ ರಾಮಮೂರ್ತಿ, ತಂಗದುರೈ, ಪ್ರಾಂಕ್‌ಸ್ಟರ್ ರಾಹುಲ್, ಒ.ಎ.ಕೆ. ಸುಂದರ್ ಮುಂತಾದವರು ನಟಿಸಿದ್ದಾರೆ.

ಸರವಣನ್ ಅಭಿಮನ್ಯು ಛಾಯಾಗ್ರಹಣ ನಿರ್ವಹಿಸುತ್ತಿದ್ದು, ಆಶಿವಗನ್ ಸಂಗೀತ ನೀಡಿದ್ದಾರೆ. ಲಾರೆನ್ಸ್ ಕಿಶೋರ್ ಸಂಕಲನ ಚಿತ್ರಕ್ಕಿದೆ.