‘ಪಬ್ಬಾರ್’ಗಾಗಿ ಹೊಸ ಲುಕ್..ಸ್ಮಾರ್ಟ್ SP ಆಗಿ ಕಾಣಿಸ್ತಾರೆ ಅಯ್ಯಪ್ಪ
ಗೀತಾ ಪಿಕ್ಚರ್ಸ್ ಬ್ಯಾನರ್ ನಲ್ಲಿ ಗೀತಾ ಶಿವರಾಜ್‌ಕುಮಾರ್ ನಿರ್ಮಾಣದ “ಪಬ್ಬಾರ್” ಚಿತ್ರವನ್ನು ಶಾಖಾಹಾರಿ ಚಿತ್ರದ ನಿರ್ದೇಶಕ ಸಂದೀಪ್ ಸುಂಕದ್ ನಿರ್ದೇಶನ ಮಾಡುತ್ತಿದ್ದು, ಇದೀಗ ಚಿತ್ರ ತಂಡದಿ0ದ ಹೊಸ ಸುದ್ದಿಯೊಂದು ಹೊರಬಂದಿದೆ. ಅದೇನೆಂದರೆ ಚಿತ್ರಕ್ಕೆ ದಕ್ಷಿಣ ಭಾರತದ ಖ್ಯಾತ ಕಲಾವಿದ ಅಯ್ಯಪ್ಪ ಎಂಟ್ರಿ ಕೊಟ್ಟಿದ್ದಾರೆ.
ಹೌದು, ಅಯ್ಯಪ್ಪ ಶರ್ಮ ಪಬ್ಬಾರ್ ಸಿನಿಮಾದಲ್ಲಿ ಖಡಕ್ ಪೊಲೀಸ್ ಆಫೀಸರ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಪಾತ್ರಕ್ಕಾಗಿ ಅಯ್ಯಪ್ಪ 14 ವರ್ಷದ ಬಳಿಕ ಹೇರ್ ಕಟ್ ಮತ್ತು ಕ್ಲೀನ್ ಶೇವ್ ಮಾಡಿ ಸ್ಮಾರ್ಟ್ ಲುಕ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಈ ಹಿಂದೆ ಉದ್ದ ಗಡ್ಡ ಬಿಟ್ಟು ತಮ್ಮ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ ಅಯ್ಯಪ್ಪ ಅವರು ಪಬ್ಬಾರ್ ಸಿನಿಮಾದ SP ಪಾತ್ರಕ್ಕಾಗಿ ಗಡ್ಡಕ್ಕೆ ಕತ್ತರಿ ಹಾಕಿಸಿಕೊಂಡಿದ್ದಾರೆ.

ಪಬ್ಬಾರ್ ಕ್ರೈಂ, ಅಡ್ವೆಂಚರಸ್ ಥ್ರಿಲ್ಲರ್ ಸಿನಿಮಾವಾಗಿದ್ದು, ಧೀರೇನ್ ರಾಮ್ ಕುಮಾರ್ ನಾಯಕನಾಗಿ, ಅಮೃತಾ ಪ್ರೇಮ್ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಹಿಮಾಚಲ ಪ್ರದೇಶದ ಶಿಮ್ಲಾ ಬಳಿಯ ಪಬ್ಬಾರ್ ನದಿ ಈ ಚಿತ್ರಕಥೆಗೆ ಕೇಂದ್ರಬಿಂದು ಹಾಗಾಗಿ ಚಿತ್ರಕ್ಕೆ ‘ಪಬ್ಬಾರ್’ ಎಂಬ ಟೈಟಲ್ ಇಡಲಾಗಿದೆ.
ಪ್ರಮುಖ ಪಾತ್ರಗಳಲ್ಲಿ ಅಚ್ಯುತ್ ಕುಮಾರ್, ಗೋಪಾಲಕೃಷ್ಣ ದೇಶಪಾಂಡೆ, ಹಿರಿಯ ನಟ ರಾಮಕೃಷ್ಣ, ಸಕುಟುಂಬ ಸಮೇತ ಖ್ಯಾತಿಯ ಭರತ್ ಜಿಬಿ, ಶ್ರೀಹರ್ಷ ಗೋಭಟ್ ನಟಿಸುತ್ತಿದ್ದಾರೆ. ಚಿತ್ರಕ್ಕೆ ಮಯೂರ್ ಅಂಬೇಕಲ್ಲು ಸಂಗೀತ, ವಿಶ್ವಜಿತ್ ರಾವ್ ಕ್ಯಾಮರಾವರ್ಕ್ ಇದೆ.