ಪ್ರಣವ್ ಮೋಹನ್ ಲಾಲ್ ನಟನೆಯ ಡೀಯಸ್ ಈರೇ
ಎಸ್.ಶಶಿಕಾಂತ್ ಮತ್ತು ಚಕ್ರವರ್ತಿ ರಾಮಚಂದ್ರ ಒಡೆತನದ ’ನೈಟ್ ಶಿಫ್ಟ್ ಸ್ಟುಡಿಯೋ’ ಸಂಸ್ಥೆಯಿಂದ ನಿರ್ಮಾಣ ಆಗುತ್ತಿರುವ ಡೀಯಸ್ ಈರೇ ಸಿನಿಮಾದ ನಾಯಕನಾಗಿ ಮಾಲಿವುಡ್ ಸೂಪರ್ ಸ್ಟಾರ್ ಮೋಹನ್ಲಾಲ್ ಪುತ್ರ ಪ್ರಣವ್ ಮೋಹನ್ಲಾಲ್ ಅಭಿನಯಿಸಿದ್ದಾರೆ.
ಕಳೆದವಾರ ಎರಡು ನಿಮಿಷದ ಟ್ರೇಲರ್ ಹೊರಬಂದಿದ್ದು, ಕೆಲವೇ ಗಂಟೆಗಳಲ್ಲಿ ಹತ್ತು ಲಕ್ಷಕ್ಕೂ ಹೆಚ್ಚು ವೀಕ್ಷಣೆ ಕಂಡು ಸದ್ದು ಮಾಡುತ್ತಿದೆ.
“ಕೋಪದ ದಿನ” ಎಂದು ಇಂಗ್ಲೀಷ್ನಲ್ಲಿ ಅಡಿಬರಹ ಇದೆ. ಹಾರರ್ ಥ್ರಿಲ್ಲರ್ ಕಥೆಯಲ್ಲಿ ಒಂದಷ್ಟು ನೈಜ ಘಟನೆಗಳನ್ನು ಆಧಾರಿಸಿ ಮಾಡಿರುವ ಸಿನಿಮಾ ಇದಾಗಿದ್ದೆ. ಅಂದ ಹಾಗೆ ಸಿನಿಮಾವು ಮಲಯಾಳಂ ಭಾಷೆಯಲ್ಲಿ ಇದೇ ಅಕ್ಟೋಬರ್, 31 ರಂದು ವಿಶ್ವದಾದ್ಯಂತ ತೆರೆ ಕಾಣುತ್ತಿದೆ.

ರಾಹುಲ್ ಸದಾಸಿವನ್ ರಚನೆ ಹಾಗೂ ನಿರ್ದೇಶನ ಮಾಡಿದ್ದಾರೆ. ತಾರಾಗಣದಲ್ಲಿ ಜಿಬಿನ್ ಗೋಪಿನಾಥ್, ಅರುಣ್ ಅಜಿಕುಮಾರ್, ಮನೋಹರಿ ಜಾಯ್ ಮುಂತಾದವರು ನಟಿಸಿದ್ದಾರೆ.
ಸಂಗೀತ ಕ್ರಿಸ್ಟೋ ಕ್ಸೇವಿಯರ್, ಛಾಯಾಗ್ರಹಣ ಶೆಹನಾದ್ ಜಲಾಲ್, ಸಂಕಲನ ಶಫಿಕ್ಯೂ ಮೊಹಮ್ಮದ್ ಅಲಿ ಅವರದಾಗಿದೆ.