ಮಳೆ ಹೊಯ್ಯುತ್ತಿದೆ ಚಿತ್ರದ ಹಾಡು ಬಿಡುಗಡೆ

0
20260215_122653.jpg

ಹೊಸಬರು ನಟಿಸಿರುವ ಮತ್ತೆ ಮಳೆ ಹೊಯ್ಯುತ್ತಿದೆ ಚಿತ್ರದ ಹಾಡಿನ ಬಿಡುಗಡೆ ಕಾರ್ಯಕ್ರಮ ನಡೆಯಿತು. ಕನ್ನಡ ಚಿತ್ರರಂಗದ ನಿರ್ದೇಶಕರದ “ನಾಗಣ್ಣ” ಅವರು ಚಿತ್ರವನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದರು.

“ಮನ ಮನದಿ”… ಹಾಡು ನಕ್ಷ ಕ್ಲಾಸಿಕ್ ಯು ಟ್ಯೂಬ್‌ನಲ್ಲಿ ಬಿಡುಗಡೆ ಆಗಿದ್ದು, ಕಬ್ಬಡಿ ನರೇಂದ್ರ ಬಾಬು ರಚಿಸಿರುವ ಹಾಡಿಗೆ ಅರ್ಮಾನ್ ಮಲಿಕ್ ಹಾಗೂ ಅಂಕಿತ ದನಿ ಆಗಿದ್ದಾರೆ.

ಮೂರು ದಶಕಗಳಿಂದ ಸಹಾಯಕ ಕಲಾ ನಿರ್ದೇಶಕರಾಗಿರುವ ಗಂಗಾಧರ್ ಶ್ರೀ ಗವಿರಂಗನಾಥ ಸ್ವಾಮಿ ಪಿಕ್ರ‍್ಸ್ ಬ್ಯಾನರ್ ಅಡಿಯಲ್ಲಿ ಪತ್ನಿ ಸುಮ ಹೆಸರಿನಲ್ಲಿ ಬಂಡವಾಳ ಹೂಡುತ್ತಿದ್ದಾರೆ.ಶೃತಿ ಅನಿಲ್‌ಕುಮಾರ್ ಸಹ ನಿರ್ಮಾಪಕರು ಹಾಗೂ ಪ್ರಾಧ್ಯಾಪಕರ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.
ಹಲವು ವರ್ಷಗಳಿಂದ ಸಿನಿಮಾರಂಗದಲ್ಲಿ ಸಕ್ರಿಯರಾಗಿರುವ ಪರಮ್ ಗುಬ್ಬಿ ನಿರ್ದೇಶನ ಮಾಡಿದ್ದಾರೆ. ಚಿತ್ರಕಥೆ-ಸಂಭಾಷಣೆ-ಸಾಹಿತ್ಯ ಕಬ್ಬಡಿ ನರೇಂದ್ರಬಾಬು, ಸಂಗೀತ ಅತಿಶಯಜೈನ್ ಅವರದಾಗಿದೆ.

ನಿರ್ಮಾಪಕರ ಮಗ ಜಿ.ಲಿಖಿತ್ ಮತ್ತು ಎರಡು ಶೇಡ್‌ಗಳಲ್ಲಿ ಕಾಣಿಸಿಕೊಂಡಿರುವ ರಂಗಭೂಮಿಯ ಜಯವರ್ಧನ್ ನಾಯಕರುಗಳು. ನಾಯಕಿಯರುಗಳಾಗಿ ಸುಲಕ್ಷಾ ಕೈರಾ, ಭೂಮಿಕಗೌಡ. ಇವರೊಂದಿಗೆ ಚಂದ್ರಶೇಖರ ರೆಡ್ಡಿ.ಎ.ಎಂ, ಪ್ರಕಾಶ್‌ಮೂರ್ತಿ, ಕುಮಾರಿ ಸ್ವರ್ಣ, ಶೃತಿ, ದಿನಮಣಿ, ಕಾವ್ಯ ಕುಮಾರಿ ಮುಂತಾದವರು ಅಭಿನಯಿಸಿದ್ದಾರೆ.

ಸಾಹಿತಿ ಕೆ.ಸದಾಶಿವ ವಿರಚಿತ ಸಣ್ಣಕತೆಗಳಲ್ಲಿ ಒಂದಾದ ಮತ್ತೆ ಮಳೆ ಹೂಯ್ಯುತಿದೆ ಕೃತಿಯನ್ನು ಬಳಸಲಾಗಿದೆ. ಚಿತ್ರವು 80ರ ದಶಕ ಹಾಗೂ 2000ನೇ ಇಸವಿಯಲ್ಲಿ ನಡೆಯುವ ಎರಡು ಕಾಲಘಟ್ಟದ ಅಂಶಗಳನ್ನು ಚಿತ್ರದಲ್ಲಿ ಕಾಣಬಹುದು. ಮೊದಲನೇ ಜೋಡಿಯ ಪ್ರೇಮ ಕತೆ ವಿಫಲವಾಗುತ್ತದೆ. ಎರಡನೇ ಜೋಡಿಯ ಲವ್ ಸ್ಟೋರಿ ಯಶಸ್ಸು ಕಾಣುತ್ತದೆ. ಇವೆರೆಡರ ನಡುವೆ ಸನ್ನಿವೇಶಗಳು ಮನಸ್ಸನ್ನು ಕದಡುತ್ತದೆ.
ಸಿನಿಮಾದಲ್ಲಿ ಮಳೆಯು ಮಹತ್ವದ ಪಾತ್ರವನ್ನು ವಹಿಸಿದೆ. ಜತೆಗೆ ಅರ್ಥಪೂರ್ಣ ಸಂದೇಶಗಳು ಅಲ್ಲಲ್ಲಿ ಬರುತ್ತದೆ. ಶೃಂಗೇರಿ, ಹೊರನಾಡು, ಕೊಪ್ಪ, ಹರಿಹರಪುರ, ಆಗುಂಬೆ ಸುಂದರ ತಾಣಗಳಲ್ಲಿ ಚಿತ್ರದ ಚಿತ್ರೀಕರಣವಾಗಿದೆ.

ಛಾಯಾಗ್ರಹಣ ಶಾಂತಾರಾವ್ ಇಪಿಲಿ, ಸಂಕಲನ ಧನುಷ್ ವೀರ್, ಕಲೆ ಬಾಬು ಖಾನ್, ನೃತ್ಯ ನಂದ ಅವರದಾಗಿದೆ.

Share

Leave a Reply

Your email address will not be published. Required fields are marked *