ದೇವನೊಬ್ಬ ಜಾದೂಗಾರ ಟೀಸರ್ ಬಿಡುಗಡೆ
ಸೌದಿ ಅರೇಬಿಯಾದಲ್ಲಿ ಉದ್ಯಮಿಯಾಗಿರುವ ಬಾಲಕೃಷ್ಣ ಶೆಟ್ಟಿ ನಿರ್ಮಾಣದಲ್ಲಿ ವರುಣ್ ವಸಿಷ್ಠ ನಿರ್ದೇಶನ ಮಾಡಿರುವ “ದೇವನೊಬ್ಬ ಜಾದೂಗಾರ” ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಖಟ್ವಾಂಗ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ತಯಾರಾಗಿರುವ ಈ ಚಿತ್ರದ ಟೀಸರ್ ನ್ನು ನಟಿ ಶ್ವೇತಾ ಶ್ರೀವಾಸ್ತವ್ ಬಿಡುಗಡೆ ಮಾಡಿದರು.
ನಿರ್ದೇಶಕ ಸಿಂಪಲ್ ಸುನಿ ಮತ್ತು ಬಿಗ್ ಬಾಸ್ ಖ್ಯಾತಿ ಹುಚ್ಚ ವೆಂಕಟ್ ಕಾರ್ಯಕ್ರಮಕ್ಕೆ ಆಗಮಿಸಿ ಚಿತ್ರಕ್ಕೆ ಶುಭ ಹಾರೈಸಿದರು.
“ಸಿಂಪಲ್ ಆಗಿ ಒಂದ್ ಲವ್ ಸ್ಟೋರಿ ಸಿನಿಮಾ ದಿನದಿಂದ ನನಗೆ ವರುಣ್ ಪರಿಚಯ ಇದೆ. ಅಂದಿನಿAದ ಅವರಿಗೆ ದೊಡ್ಡ ಸಿನಿಮಾ ನಿರ್ದೇಶನ ಮಾಡಬೇಕು ಎಂದು ಕನಸಿತ್ತು. ಇಂದು ಅದು ನಿಜವಾಗಿದೆ. ಇಂದು ಈ ಟೀಸರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸುವಾಗ ನನಗೆ ಹೆಮ್ಮೆ ಎನಿಸುತ್ತದೆ.“ ಎಂದರು ಸಿಂಪಲ್ ಸುನಿ
ನಿರ್ಮಾಪಕ ಬಾಲಕೃಷ್ಣ ಶೆಟ್ಟಿ ಮಾತನಾಡಿ.. “ನಾನು ಹಲವಾರು ವರ್ಷಗಳಿಂದ ವಿದೇಶದಲ್ಲಿ ಇದ್ದರೂ ನಾನು ಅಲ್ಲಿ ಕನ್ನಡ ಸಂಘ ಮಾಡಿದೆ. ಅನಿವಾಸಿ ಭಾರತೀಯರಿಗೆ ಮೊದಲ ಎನ್.ಆರ್.ಐ. ಸಂಘ ಕಟ್ಟಿದ್ದು ನಾನು. ನನ್ನ ಮಗನಿಗೆ ಚಿತ್ರನಟನಾಗಬೇಕು ಎಂದು ಬಾಲ್ಯದಿಂದಲೇ ಆಸೆ ಇತ್ತು. ನನ್ನ ಮಗನನ್ನು ನಾಯಕನೆಂದು ಮನಸ್ಸಿನಲ್ಲಿಟ್ಟುಕೊಂಡು ನಿರ್ದೇಶಕ ವರುಣ್ ಕಥೆ ಮಾಡಿದ್ದಾರೆ“ಎಂದರು.
ನಿರ್ದೇಶಕ ವರುಣ್ ಮಾತನಾಡಿ..“ಇದು ಕ್ರೈಂ ಥ್ರಿಲ್ಲರ್ ಜಾನರ್ ನ ಸಿನಿಮಾವಾಗಿದ್ದು, ದೇವ ಎನ್ನುವ ಲಾರಿ ಚಾಲಕನ ಜೀವನದ ಸುತ್ತ ಸಾಗುವ ವಿಷಯವನ್ನು ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಪ್ರತಿಯೊಬ್ಬ ಜೀವನದಲ್ಲಿ ದೇವರ ಲೆಕ್ಕಾಚಾರ ಒಂದಾಗಿರುತ್ತದೆ. ಹಾಗಾಗಿ ದೇವನೊಬ್ಬ ಜಾದೂಗಾರ ಹೆಸರಿನಲ್ಲಿ ಚಿತ್ರ ಮಾಡಲಾಗಿದೆ.
ಪ್ರತಿ ನಟರು ಇನ್ನೊಬ್ಬರಿಗೆ ಕಾಂಪೀಟ್ ಮಾಡುವ ರೀತಿಯಲ್ಲಿ ಅಭಿನಯಿಸಿದ್ದಾರೆ. ಇಲ್ಲಿ ಪ್ರತಿಯೊಬ್ಬ ನಟರ ಮೇಲೆ ಕಥೆ ಸಾಗುತ್ತದೆ ಹಾಗೂ ಚಿತ್ರೀಕರಣ ಮುಗಿದಿದ್ದು ಪೋಸ್ಟ್ ಪ್ರೊಡಕ್ಷನ್ ಸಹ ಅಂತಿಮ ಹಂತದಲ್ಲಿದೆ. . ಬೆಂಗಳೂರು, ತುಮಕೂರು ಹಾಗೂ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆದಿದೆ.“ ಎಂದು ಹೇಳಿದರು.
ನಾಯಕ ನಟ ಸಚಿನ್ ಮಾತನಾಡಿ “ನನಗೆ ಅಭಿನಯಿಸುವ ಆಸೆ ಇದ್ದರೂ ಸರಿಯಾಗಿ ಅವಕಾಶ ಸಿಕ್ಕಲಿಲ್ಲ. ಊರಿಗೆ ಬಂದಾಗ ನಾನು ವರುಣ್ ಜತೆ ಸೇರಿ ಶಾರ್ಟ್ ಮೂವಿ ಮಾಡಿದೆ. ಆಗ ನನ್ನ ರಾ ಲುಕ್ ನೋಡಿ ಈ ಕಥೆ ಹೇಳಿದ್ದ. ಈಗ ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ.“ ಎಂದು ಕೇಳಿಕೊಂಡರು.
ನಾಯಕಿ ಪ್ರಿಯಾ ಜೆ. ಆಚಾರ್ ಮಾತನಾಡಿ “ನನ್ನದು ಇದರಲ್ಲಿ ವಿಶೇಷ ಪಾತ್ರ. ಆದರೆ ಈಗಲೇ ಪಾತ್ರದ ಬಗ್ಗೆ ಏನು ಹೇಳಲಾಗದು ಎಂದರು.
ಮುಖ್ಯಮಂತ್ರಿ ಪಾತ್ರ ನಿರ್ವಹಿಸಿದ ಸುಧಾ ಬೆಳವಾಡಿ ಮಾತನಾಡಿ “ಟೈಟಲ್ ನೋಡಿ ಸಿನಿಮಾ ನೋಡಬೇಕು ಎನಿಸೋ ಚಿತ್ರ ಇದಾಗಿದೆ. ನಿರ್ದೇಶಕ ಹಾಗೂ ನಿರ್ಮಾಪಕ ಬಹಳಷ್ಟು ಕಷ್ಟಪಟ್ಟು ಈ ಚಿತ್ರ ಮಾಡಿದ್ದಾರೆ” ಎಂದರು.