ಯುವ ಸರ್ಕಾರ್ ಟೀಸರ್ ರಿಲೀಸ್

0
20260217_155651.jpg

ಯುವ ಸರ್ಕಾರ್ ಟೀಸರ್ ರಿಲೀಸ್

ಸಂತೋಷ್‌ಕುಮಾರ್ ನಿರ್ಮಾಣದ ಜತೆ ನಿರ್ದೇಶನ ಮಾಡಿರುವ ವಿಭಿನ್ನ ಶಿರ್ಷಿಕೆ ಇರುವ “ಯುವ ಸರ್ಕಾರ್” ಚಿತ್ರದ ಚಿತ್ರೀಕರಣ ಸಂಪೂರ್ಣವಾಗಿದ್ದು, ಇದೀಗ ಪೋಸ್ಟ್ ಪ್ರೊಡಕ್ಷನ್ ಕೊನೆ ಹಂತದಲ್ಲಿದೆ.

ಶ್ರೀಮತಿ ಪಾರ್ವತಮ್ಮ ರಾಜ್ ಕುಮಾರ್ ಅವರ ತಂಗಿಯ ಪುತ್ರನಾಗಿರುವ ಸಂತೋಷ್ ಕುಮಾರ್ ಅವರಿಗೂ ಸಿನಿಮಾದ ನಂಟು ಬಂದಿದ್ದು ಈ ಹಿಂದೆ ಬಿಂದಾಸ್ ಗೂಗ್ಲಿ, ಕ್ಯಾಂಪಸ್ ಕ್ರಾಂತಿ ಸೇರಿದಂತೆ ಮೂರು ಚಿತ್ರಗಳನ್ನು ಯೂಥ್ ಬೇಸ್ ಸಬ್ಜೆಕ್ಟ್ ಇಟ್ಟುಕೊಂಡೇ ನಿರ್ದೇಶನ ಮಾಡಿದ್ದಾರೆ.

ಚಿತ್ರದ ಟೀಸರ್ ಮೆಚ್ಚಿಕೊಂಡ ಶಿವಣ್ಣ.. ಸಂತೋಷ್ ನಮ್ಮ ಚಿಕ್ಕಮ್ಮನ ಮಗ, ಯುವಜನರಿಗೆ ಹತ್ತಿರವಾಗುವಂಥ ಒಂದೊಳ್ಳೆ ಕಂಟೆAಟ್ ಇಟ್ಟುಕೊಂಡು ಈ ಸಿನಿಮಾ ಮಾಡಿದ್ದಾರೆಎಂದು ಶುಭ ಹಾರೈಸಿದರು.

ಪ್ರೇಮಿಗಳ ದಿನದ ಚಿತ್ರದ ರೊಮ್ಯಾಂಟಿಕ್ ಹಾಡನ್ನು ಹಿರಿಯ ನಿರ್ಮಾಪಕ ಎಸ್.ಎ.ಚಿನ್ನೇಗೌಡ್ರು ಹಾಗೂ ಎಸ್.ಎ.ಗೋವಿಂದರಾಜ್ ಬಿಡುಗಡೆ ಮಾಡಿ ಮಾತನಾಡಿದ.. ಸಂತೋಷ್ ನಮ್ಮ ಕುಟುಂಬದವನು, ನನ್ನ ಪ್ರೀತಿಯ ತಂಗಿ ಮಗ, ಈಗಿನ ಹುಡುಗರಿಗೆ ಉತ್ತಮ ಸಂದೇಶ ಇಟ್ಟುಕೊಂಡು ಈ ಚಿತ್ರ ಮಾಡಿದ್ದಾನೆ. ಒಳ್ಳೇದಾಗಲಿ ಎಂದು ಶುಭ ಹಾರೈಸಿದರು.
ನಂತರ ಚಿತ್ರದ ಟೀಸರನ್ನು ಭಾಮ ಹರೀಶ್, ಎ.ಗಣೇಶ್, ಮಾಧವಿ ಸೇರಿ ಬಿಡುಗಡೆ ಮಾಡಿದರು.

ಚಿತ್ರದ ನಾಯಕನಾಗಿ “ವೀರೇನ್ ಕೇಶವ್“, ನಾಯಕಿಯರಾಗಿ ಬಿಗ್ ಬಾಸ್ “ಜಾಹ್ನವಿ“, “ಶೃತಿ ದೇಶಪಾಂಡೆ” ಹಾಗೂ “ಅಲ್ಫಿಯಾ” ನಟಿಸಿದ್ದಾರೆ. ಕನ್ನಡ, ಹಿಂದಿ ಹಾಗೂ ತಮಿಳು ಭಾಷೆಯಲ್ಲಿ ನೇರವಾಗಿ ಚಿತ್ರವನ್ನು ಚಿತ್ರೀಕರಿಸಲಾಗಿದ್ದು, ಮೂರು ಭಾಷೆಯ ಕಲಾವಿದರೂ ನಟಿಸಿದ್ದಾರೆ.
ನಟ ಧರ್ಮಕೀರ್ತಿರಾಜ್ ಹಾಗೂ ತಂದೆ ಕೀರ್ತಿರಾಜ್ ಕೂಡ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ನಿರ್ಮಾಪಕ, ನಿರ್ದೇಶಕ ಸಂತೋಷ್ ಕುಮಾರ್… ತಾಯಿ ಮಗನ ಮಧ್ಯೆ ನಡೆಯುವ ಎಮೋಷನಲ್ ಕಥೆಯಿದ್ದು. ತಮಿಳಲ್ಲಿ ಯುವನ್ ರಾಬಿನ್ ಹುಡ್, ಹಿಂದಿಯಲ್ಲಿ ಅದೇ ಯುವ ಸರ್ಕಾರ್ ಎಂಬ ಹೆಸರನ್ನಿಟ್ಟಿದ್ದೇವೆ. ಆಕೆ ತನ್ನ ಮಗನನ್ನು ಗಾಂಧಿಯ ಥರ ಬೆಳೆಸುತ್ತಾಳೆ, ಆದರೆ ಆ ಮಗ ಯಾಕೆ ರಾಬಿನ್ ಹುಡ್ ರೀತಿ ಆಗ್ತಾನೆ ಅನ್ನೋದೇ ಈ ಚಿತ್ರದ ಕಥೆ. ಆ ರಾಬಿನ್ ಹುಡ್ ಬಡವರಿಗೆ ಸಹಾಯ ಮಾಡ್ತಿದ್ದ, ಆತನನ್ನು ಒಬ್ಬ ದರೋಡೆಕೋರನ ಥರ ತೋರಿಸಿದ್ದರು. ಆದರೆ ನಾವಿಲ್ಲಿ ಜನಸ್ನೇಹಿಯಾಗಿ ತೋರಿಸಿದ್ದೇವೆ. ಎನ್ನುತ್ತ

ಚಿತ್ರದಲ್ಲಿ 5 ಹಾಡುಗಳಿದ್ದು, 4 ಫೈಟ್ ಗಳಿವೆ. ಚೆನ್ನೈ, ಚಿಕ್ಕಮಗಳೂರು, ಮೇಲುಕೋಟೆಯ ಸುತ್ತಮುತ್ತ ಚಿತ್ರದ ಚಿತ್ರೀಕರಣ ನಡೆಸಲಾಗಿದ್ದು, ಮೇ ಜೂನ್ ನಲ್ಲಿ ರಿಲೀಸ್ ಮಾಡುವ ಯೋಜನೆಯಿದೆ. ವೈಜಿ ಅವರು ಒಬ್ಬ ರಾಜಕಾರಣಿಯಾಗಿ ಕಾಣಿಸಿಕೊಂಡಿದ್ದಾರೆ ಎಂದು ವಿವರಿಸಿದರು.

ಉಳಿದಂತೆ ಚಿತ್ರದ ನಾಯಕ ವೀರೆನ್ ಕೇಶವ್, ಧರ್ಮ ಕೀರ್ತಿರಾಜ್, ನಾಯಕಿಯರು ತಮ್ಮ ಪಾತ್ರಗಳ ಕುರಿತಂತೆ ಮಾತನಾಡಿದರು. ಬಿಗ್ ಬಾಸ್ ಅಶ್ವಿನಿಗೌಡ ಕೂಡ ಅತಿಥಿಯಾಗಿದ್ದರು.

Share

Leave a Reply

Your email address will not be published. Required fields are marked *